Saturday, March 29, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್

ಸುರತ್ಕಲ್: ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ಕು ಮಂದಿ ಯುವಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ ನಡೆದಿದೆ.

ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30), ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೀದರ್ ಜಿಲ್ಲೆಯ ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಪುತ್ರ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ