ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ -ಕಹಳೆ ನ್ಯೂಸ್
ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ಜ. 8ರಂದು ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನಭಾಗ್ ರವರು ಪರೀಕ್ಷಾ ತಯಾರಿಗಳ ಬಗ್ಗೆ, ಪ್ರಶ್ನೆ ಪತ್ರಿಕೆ ಮಾದರಿಯಲ್ಲಿನ ಬದಲಾವಣೆಗಳು, ಪ್ರಾಯೋಗಿಕ ಪರೀಕ್ಷೆಗಳು ಮತ್ತು ಪರೀಕ್ಷಾ ವೇಳಾಪಟ್ಟಿಯ ಬಗ್ಗೆ
ಮಾಹಿತಿಯನ್ನು ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ ,ಜೆಇಇ , ನೀಟ್ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯವಿರುವ ದಾಖಲೆಗಳು , ಪರೀಕ್ಷೆಗಳಿಗೆ ವಿದ್ಯಾರ್ಥಿಗಳು
ಮಾಡಲೇಬೇಕಾದ ತಯಾರಿಯ ಬಗ್ಗೆ ಮತ್ತು ಪಿಯುಸಿ ನಂತರದ ಕೊರ್ಸ್ಗಳ ಆಯ್ಕೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್
ಇಂಜಿನಿಯರಿAಗ್ ಅಂಡ್ ಟೆಕ್ನಾಲಜಿ ಇದರ ಅಡ್ಮಿಶನ್ಸ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ವಂದನಾ ಶಂಕರ್ ಇವರು ನೀಡಿದರು.ಮತ್ತು ಸಂವಾದವನ್ನು ನಡೆಸಿ,
ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋಷಕರ ಜವಾಬ್ದಾರಿಯನ್ನು ತಿಳಿಸಿದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ರೇಣುಕಾ ಸ್ವಾಗತಿಸಿ ವಂದಿಸಿದರು.