ಪುತ್ತೂರು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ದೀಕ್ಷಿತಾ ಅವರು ಜ 9 ರಂದು ಕಾಲೇಜಿಗೆ ಹೋಗಿದ್ದು ಅಲ್ಲಿಂದ ಸಂಜೆ ವಾಪಸ್ಸು ಮನೆಗೆ ಬಂದಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ತಂದೆ ಕೇಶವ, ತಾಯಿ ಪುಷ್ಪಾ, ಸಹೋದರ ದೀಕ್ಷಿತ್ ಅವರನ್ನು ಅಗಲಿದ್ದಾರೆ.