ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ -ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಅಧ್ಯಕ್ಷೀಯ ನುಡಿಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದೆ. ಅದನ್ನು ಹೊರಗೆ ತೆಗೆಯುವ ಪ್ರಯತ್ನ. ಅದಕೋಸ್ಕರ ನಮ್ಮ ಸಂಸ್ಥೆಯಲ್ಲಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ. ಅದರಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಕೊಂಡಿದ್ದೀರಿ. ಮುಂದಿನ ದಿನಗಳಲ್ಲಿ ಸ್ಪರ್ಧೆಗಳನ್ನು ನಡೆಸುವಾಗ ತಯಾರಿಯಾಗಿ ಬನ್ನಿ, ಮನಸ್ಸಿಟ್ಟು ಭಾಗವಹಿಸಿ ಬಹುಮಾನವನ್ನು ಗೆಲ್ಲಿ ಎಂದು ಮಕ್ಕಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ 1 ರಿಂದ 7ನೇ ತರಗತಿಯವರೆಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಬೌದ್ಧಿಕ ಸ್ಪರ್ಧೆ, ಕ್ರೀಡೆ ಹಾಗೂ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ – ಪುರಸ್ಕಾರ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿಶ್ಚಲ್ ಜಿ ಶೆಟ್ಟಿ ಕಲ್ಲಾಡಿ , ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು , ಇರಾ ಅಂಚೆ ಪಾಲಕ ಸುರೇಶ್ ರೈ, ಕಲ್ಲಡ್ಕ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ನ ವ್ಯವಸ್ಥಾಪಕ ಮಂಜು ಕುಮಾರ್, ಕಲ್ಲಡ್ಕ ಸಾಲಿಯಾನ್ ಸರ್ವಿಸಸ್‌ನ ಮಾಲಕರು ಚಂದ್ರಶೇಖರ ಸಾಲಿಯಾನ್ , ಸಹಕಾರಿ ಪ್ರಕೋಷ್ಟದ ಬಂಟ್ವಾಳ ತಾಲೂಕು ಸಂಚಾಲಕ ಜಯರಾಮ ರೈ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್, ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಮಾತೃಸ್ವರೂಪಿಣಿ ಡಾ| ಕಮಲಾ ಪ್ರಭಾಕರ್ ಭಟ್ ಹಾಗೂ ಮುಖ್ಯೋಪಾಧ್ಯಾಯ ರವಿರಾಜ್ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಪ್ರಾಪ್ತಿ ರೈ ನಿರೂಪಿಸಿ, ಸುಶ್ಮಿತಾ ಭಟ್ ಸ್ವಾಗತಿಸಿ, ನಿನಾದ್ ಕೈರಂಗಳ ವಂದಿಸಿದರು.