ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು ;ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿ-ಕಹಳೆ ನ್ಯೂಸ್
ಉಡುಪಿ: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.
ಕೊರಂಗ್ರಪಾಡಿಯಿAದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ.
ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಏಟಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಮರುಕ್ಷಣ ಟ್ರಕ್ ನಲ್ಲೂ ಬೆಂಕಿ ಕಾಣಿಸಿಕೊಂಡಿದ್ದು ಟಗರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮದ್ಯ ರಾತ್ರಿ ಘಟನೆ ಸಂಭವಿಸಿದ ಕಾರಣ ತುರ್ತು ಪರಿಹಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗದೇ ಬೆಂಕಿಗೆ ಆಹುತಿಯಾಗುವಂತಾಗಿದೆ.
ಉಡುಪಿ ಅಗ್ನಿಶಾಮಕ ಸಿಬ್ಬಂದಿಗಳಿAದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.