Recent Posts

Sunday, January 12, 2025
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಚಾಮರಾಜಪೇಟೆಯಲ್ಲಿ ಕಾಮಧೇನುವಿನ ಕೆಚ್ಚಲು ಕೊಯ್ದ ದುರುಳರು ; ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲು ಕತ್ತರಿಸಿದ್ರಾ!? – ಕಹಳೆ ನ್ಯೂಸ್

ಬೆಂಗಳೂರು: ಪ್ರತಿಭಟನೆಗೆ ಹಸುಗಳನ್ನು ಕರೆದುಕೊಂಡು ಹೋಗಿದ್ದಕ್ಕೆ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ.

ಹೌದು. 6 ತಿಂಗಳ ಹಿಂದೆ ಚಾಮರಾಜಪೇಟೆಯ ಪಶು ಆಸ್ಪತ್ರೆ ಎತ್ತಂಗಡಿಗೆ ಪ್ಲ್ಯಾನ್ ನಡೆದಿತ್ತು. ಪ್ರತಿಭಟನೆಯ ವೇಳೆ ಈ ಹಸುಗಳನ್ನು ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲ ದಿನಗಳ ಹಿಂದೆ ಹಸುವಿನ ಗುದಾದ್ವಾರಕ್ಕೆ ಪೈಪ್ ಇಟ್ಟು ವಿಕೃತಿ ಮೆರೆದಿದ್ದರು. ಈಗ ಶನಿವಾರ ಕೆಚ್ಚಲುಗೆ ಚಾಕು ಹಾಕಿ ಇರಿದಿದ್ದಾರೆ. ಪಶು ಆಸ್ಪತ್ರೆ ಉಳಿಸಲು ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ವಿರೋಧಿಗಳು ಈ ಕೃತ್ಯ ಎಸಗಿರಬಹುದೆಂಬ ಅನುಮಾನವನ್ನು ಮಾಲೀಕರು ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಮಹಿಳಾ ನಿವಾಸಿಗಳು ದೂರಿಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್‌ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ರಾಜ್ಯದದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಾಗ್ದಾಳಿ ನಡೆಸಿದರು.

ಪ್ರತಿಭಟನೆ ಯಾಕೆ?
ಚಾಮರಾಜಪೇಟೆ ಪಶು ಆಸ್ಪತ್ರೆಯು ಹಲವು ವರ್ಷಗಳಿಂದ ಪಶುಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗಿತ್ತು. ಸರ್ಕಾರ ಈ ಆಸ್ಪತ್ರೆ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ನೀಡಿ ಆದೇಶ ಹೊರಡಿಸಿತ್ತು. ಜೊತೆಗೆ ಪಶು ಆಸ್ಪತ್ರೆಯನ್ನೂ ಸ್ಥಳಾಂತರ ಮಾಡಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಾಮರಾಜಪೇಟೆ ನಿವಾಸಿಗಳು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲದೇ ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ಮಾಡಿದ ಕೋರ್ಟ್‌ ಚಾಮರಾಜಪೇಟೆ ಪಶು ಆಸ್ಪತ್ರೆಯನ್ನು ವಕ್ಫ್ ಬೋರ್ಡ್‌ಗೆ ನೀಡಲಾದ ಸರ್ಕಾರಿ ಆದೇಶಕ್ಕೆ ತಡೆಯನ್ನು ನೀಡಿದೆ. ಜೊತೆಗೆ ಚಾಮರಾಜಪೇಟೆಯ ಪಶು ಆಸ್ಪತ್ರೆ ಸ್ಥಳಾಂತರ ಮಾಡುವುದನ್ನು ಕೂಡ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುಯಂತೆ ಹೈಕೊರ್ಟ್ ಸೂಚನೆ ನೀಡಿತ್ತು.