2024-25 ನೇ ಸಾಲಿನ ಕೊರಗ ಸಮುದಾಯದ ತಾಲೂಕು ಮಟ್ಟದ ಕುಂದು ಕೊರತೆ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್
ಕಾಪು : 2024-25 ನೇ ಸಾಲಿನ ಕೊರಗ ಸಮುದಾಯದ ಕಾಪು ತಾಲೂಕು ಮಟ್ಟದ ಕುಂದು ಕೊರತೆ ಸಭೆ ಇಂದು ದಿನಾಂಕ 13-01-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯ ಕಾಪು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೊರಗ ಸಮುದಾಯದ ಕುಂದು ಕೊರತೆ ಬಗ್ಗೆ ಚರ್ಚಿಸಿ ಸರ್ಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ವಾಸ್ತವ್ಯ ಇರುವವರಿಗೆ ಅವರ ಹೆಸರಿನಲ್ಲಿ ದಾಖಲೆಗಳನ್ನು ನೀಡುವ ಬಗ್ಗೆ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ತಾಲೂಕು ತಹಶೀಲ್ದಾರರಾದ ಪ್ರತಿಭಾ ಆರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಐಟಿಡಿಪಿ ಅಧಿಕಾರಿಗಳಾದ ನಾರಾಯಣ ಸ್ವಾಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕೊರಗ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.