Recent Posts

Wednesday, January 15, 2025
ಬೆಳಗಾವಿರಾಜ್ಯಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಸಚಿವೆ ಹಾಗೂ ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ – ಕಹಳೆ ನ್ಯೂಸ್

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿAದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗಿನಜಾವ 6 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.