Sunday, January 19, 2025
ಕ್ರೈಮ್ಸುದ್ದಿಹುಬ್ಬಳ್ಳಿ

ಪ್ರೇಯಸಿಯೊಂದಿಗಿನ ಮನಸ್ತಾಪದಿಂದಾಗಿ ಯುವತಿಯ ಖಾಸಗಿ ವಿಡಿಯೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಹುಬ್ಬಳ್ಳಿ : ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಉಂಟಾಗಿ ಯುವಕನೊಬ್ಬ ಆಕೆಯ ಖಾಸಗಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಂದೇಶ ಉಣಕಲ್ ಎಂದು ತಿಳಿದುಬಂದಿದ್ದು ಈತ ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯಿಂದ ನಾಪತ್ತೆಯಾಗಿದ್ದು ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.