Saturday, January 18, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರ್ನಾಟಕ ಕ್ರೀಡಾಕೂಟಕ್ಕೆ 5 ಕೋ.ರೂ. ; ಮುಲ್ಲೈ ಮುಗಿಲನ್ -ಕಹಳೆ ನ್ಯೂಸ್

ಮಂಗಳೂರು: ರಾಜ್ಯ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲಾಡಳಿತಗಳ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿರುವ ಕರ್ನಾಟಕ ಕ್ರೀಡಾಕೂಟಕ್ಕೆ 2024-25ನೇ ಸಾಲಿನ ಬಜೆಟ್‌ನಲ್ಲಿ 5 ಕೋಟಿ ರೂ.ಗಳನ್ನು ಸರಕಾರ ಒದಗಿಸಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳಾ ಕ್ರೀಡಾಂಗಣದಲ್ಲಿ ಜ. 17ರಂದು ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಸಮಾರೋಪ ಸಮಾರಂಭ ಜ. 23ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ವರ್ಷ ದಸರಾ ಕ್ರೀಡಾ ಕೂಟದ ಜತೆಗೆ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ವರ್ಷದಿಂದ ಪ್ರತ್ಯೇಕವಾಗಿ ಕರ್ನಾಟಕ ಕ್ರೀಡಾಕೂಟ ಹೆಸರಿನಲ್ಲಿ ಆಯ್ದ ಉನ್ನತ ಮಟ್ಟದ ಕ್ರೀಡಾಪಟುಗಳೊಂದಿಗೆ ಒಲಿಂಪಿಕ್ ಮಾದರಿಯಲ್ಲಿ ಆಯೋಜಿಸಲಾಗಿದೆ. ಭಾಗವಹಿಸುವ ಕ್ರೀಡಾಪಟುಗಳ ಸಮಗ್ರ ಮಾಹಿತಿಯೊಂದಿಗೆ, ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಆಟಗಾರರಿಗೆ ಕ್ಯೂಆರ್ ಕೋಡ್ ಹೊಂದಿರುವ ಐಡಿ ಕಾರ್ಡ್ ವಿತರಿಸುವ ವ್ಯವಸ್ಥೆಯಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಜಿತೇಂದ್ರ ಶೆಟ್ಟಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಕ್ರೀಡಾಕೂಟ 2025ರ ವಿಶೇಷ ಆಕರ್ಷಣೆಯಾಗಿ ಉದ್ಘಾಟನ ಸಮಾರಂಭದ ವೇಳೆ ಮಂಗಳಾ ಕ್ರೀಡಾಂಗಣದಲ್ಲಿ ಧ್ವನಿ ಮತ್ತು ಬೆಳಕಿನ ಪ್ರದರ್ಶನ ಆಯೋ ಜಿಸಲಾಗಿದೆ.

ಜಿ.ಪಂ. ಸಿಇಒ ಡಾ| ಆನಂದ್, ಯುವ ಜನ ಸಬಲೀಕರಣ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿ ಸೋಜಾ, ಮನಪಾ ಆಯುಕ್ತ ಆನಂದ್ ಸಿ.ಎಲ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.