Saturday, January 18, 2025
ಕ್ರೈಮ್ಸಿನಿಮಾಸುದ್ದಿ

ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್‌ ಗಂಭೀರ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ –ಕಹಳೆ ನ್ಯೂಸ್

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.

ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪತ್ತೆ ಹಲವು ತಂಡಗಳನ್ನು ರಚಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೈಫ್ ಗಾಯಗೊಂಡಿದ್ದು ಹೇಗೆ

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಧ್ಯಮ ವರದಿಗಳ ಪ್ರಕಾರ, ಸೈಫ್ ಅಲಿಖಾನ್ ಹಾಗೂ ಕಳ್ಳನ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ನಿರಾಯುಧರಾಗಿದ್ದ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಇದಾದ ನಂತರ ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಈ ಘಟನೆಯಿಂದಾಗಿ ಸೈಫ್ ಆರೋಗ್ಯದ ಬಗ್ಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಚಿಂತಾಕ್ರಾಂತರಾಗಿದ್ದಾರೆ.

ಸದ್ಯ ಸೈಫ್ ಅಲಿಖಾನ್ ಮನೆಯಲ್ಲಿ ಪೊಲೀಸರು ಇದ್ದಾರೆ. ಘಟನೆ ಹೇಗೆ ನಡೆದಿದೆ, ಕಳ್ಳ ಹೇಗೆ ಪ್ರವೇಶಿಸಿದ್ದಾನೆ, ಈ ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪೊಲೀಸರ ಪ್ರಕಾರ ಕಳ್ಳನೊಬ್ಬನೇ ಈ ಕೃತ್ಯ ಎಸಗಿದ್ದಾನೆ. ಸೈಫ್ ಅಲಿ ಖಾನ್ ಅವರ ಮನೆಕೆಲಸದಾಕೆ ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಹೇಳುತ್ತಾರೆ. ಆಗ ಸೈಫ್ ಕೂಡ ಬಂದು ಕಳ್ಳನನ್ನು ಹಿಡಿಯಲು ಯತ್ನಿಸಿದ್ದಾರೆ. ಸೈಫ್ ತನ್ನ ಮನೆಯ ಕೆಲಸದಾಕೆಯನ್ನು ರಕ್ಷಿಸುವ ವೇಳೆ ಅವರ ಮೇಲೆ ಚಾಕುವಿನಿಂದ ಇರಿಯಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆಕೋರನೊಂದಿಗಿನ ಗಲಾಟೆಯಲ್ಲಿ ಅವರು ಚಾಕುವಿನಿಂದ ಇರಿಯಲ್ಪಟ್ಟಿದ್ದಾರೆ, ಅವರಿಗೆ ಎಷ್ಟು ಗಾಯಗಳಾಗಿವೆ ಅನ್ನೋದು ಆರಂಭದಲ್ಲಿ ಸ್ಪಷ್ಟವಾಗಿಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮುಂಬೈ ಅಪರಾಧ ವಿಭಾಗವು ಘಟನೆಯ ಬಗ್ಗೆ ಕೂಲಂಕುಶ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲೀಲಾವತಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀರಜ್ ಉತ್ತಮಿ ಅವರು, ಸೈಫ್ ಅಲಿ ಖಾನ್ ಅವರನ್ನು ಬೆಳಗಿನ ಜಾವ 3:30ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ದೇಹದ ಮೇಲೆ ಆರು ಗಾಯಗಳಾಗಿದೆ. ಎರಡು ಬಾರಿ ಗಂಭೀರವಾಗಿ ಇರಿತಕ್ಕೊಳಗಾಗಿದ್ದಾರೆ. ಒಂದು ಗಾಯವು ಅವರ ಬೆನ್ನುಮೂಳೆಯ ಹತ್ತಿರದಲ್ಲಿದೆ. ನರಶಸ್ತ್ರ ಚಿಕಿತ್ಸಕ ನಿತಿನ್ ಡಾಂಗೆ, ಸೌಂದರ್ಯವರ್ಧಕ ಶಸ್ತ್ರಚಿಕಿತ್ಸಕ ಲೀನಾ ಜೈನ್ ಮತ್ತು ಅರಿವಳಿಕೆ ತಜ್ಞ ನಿಶಾ ಗಾಂಧಿ ನಟ ಖಾನ್‌ಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರವೇ ಹಾನಿಯ ಪ್ರಮಾಣವನ್ನು ನಾವು ಹೇಳಲು ಸಾಧ್ಯವಾಗುತ್ತದೆ ಎಂದು ಉತ್ತಮಿ ಹೇಳಿದ್ದಾರೆ. ಈ ದಾಳಿಯಲ್ಲಿ ಸೈಫ್ ಅಲಿ ಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.