Monday, January 20, 2025
ಸುದ್ದಿ

Big News : ಅನಂತ್‌ಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್‌

ಬೆಂಗಳೂರು[ನ.12]  ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿ 8.45 ಗಂಟೆ ಸುಮಾರಿಗೆ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅನಂತ್ ಕುಮಾರ್ ನಿವಾಸದಲ್ಲಿಯೇ ಅಂತಿಮ ನಮನ ಸಲ್ಲಿಸಿದ್ದಾರೆ. ವಿಮಾನದ ಮೂಲಕ ಇಂದೇ ದೆಹಲಿಗೆ ಪ್ರಧಾನಿ ಹಿಂದಿರುಗಲಿದ್ದಾರೆ. ಪ್ರಧಾನಿ ಆಗಮನದ ಕಾರಣಕ್ಕೆ ಬಸವನಗುಡಿ ಮತ್ತು ಜಯನಗರ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅನಂತಕುಮಾರ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ತರಲಾಗುತ್ತಿದ್ದು, ಅಲ್ಲಿ ಬೆಳಗ್ಗೆ 8ರಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಬೆಳಗ್ಗೆ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಒಯ್ದು ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.  ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.‌