ಉಡುಪಿ : ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳಾಗುತ್ತಿದ್ದು ಹಿಂದೂಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡುವುದು
ಹಿಂದೂ ಸ್ತ್ರೀಯರನ್ನು ಅತ್ಯಾಚಾರ ಮಾಡುವುದು, ಹಿಂದೂಗಳ ಆಸ್ತಿಯನ್ನು ವಶಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ.
ಅನೇಕ ದೇಶಗಳಲ್ಲಿ ಬಾಂಗ್ಲಾದೇಶದಲ್ಲಿ ಅಧ್ಯಾತ್ಮ ಪ್ರಸಾರ ಮಾಡುವ ಇಸ್ಕಾನ್ ಸಂಸ್ಥೆಯ ಮೇಲೆ ಅಕ್ರಮಣವನ್ನು ನಡೆಸಿ ಅದರ ಪ್ರಮುಖರ ಮೇಲೆ ದಾಳಿ ಮಾಡುವುದು, ಅವರನ್ನು ಅಕ್ರಮವಾಗಿ ಬಂಧಿಸುವAತಹ ಅಮಾನವೀಯ ಕೃತ್ಯಗಳು ನಡೆಯುತ್ತಿದ್ದು ಇದರ ಬಗ್ಗೆ ವಿಶ್ವದಾದ್ಯಂತ ತುಂಬಾ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.ಆದ್ಧರಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಸರಕಾರವು ಬಾಂಗ್ಲಾದೇಶಿ ಹಿಂದೂಗಳಗೆ ಸುರಕ್ಷತೆಯನ್ನು ನೀಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು ಮತ್ತು ಹಿಂದುತ್ವನಿಷ್ಠರು ಒಂದಾಗಿ ಉಡುಪಿಯ ಶ್ರೀಕೃಷ್ಣ ಮಠದ ಮಹಾದ್ವಾರದ ಮುಂಭಾಗ ಮತ್ತು ಮಣಿಪಾಲದ ಬಬ್ಬುಸ್ವಾಮಿ ದೇವಸ್ಥಾನದ ಎದುರು ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ಮಾಡಿದರು.
You Might Also Like
ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.!– ಕಹಳೆ ನ್ಯೂಸ್
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ....
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಿಳಿಯೂರಿನ ತಿಪ್ಪಕೋಡಿ ಮನೆಯಂಗಳದಲ್ಲಿ ಜ.22ರಂದು ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್
ಉಪ್ಪಿನಂಗಡಿ : ಬಿಳಿಯೂರಿನ ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಯವರ ಮನೆಯಂಗಳದಲ್ಲಿ ಜ.22ರ ಸಂಜೆ 6 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ...
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್ – ಕಹಳೆ ನ್ಯೂಸ್
ಬೆಂಗಳೂರು: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5ಲಕ್ಷವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ...
ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್
ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್...