ಸುಳ್ಯ: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಎಂದು ತಿಳಿದು ಬಂದಿದೆ.
ಅವರ ಪತ್ನಿ ವಿನೋದ (43) ಹತ್ಯೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನದೇ ಲೈಸನ್ಸ್ ಹೊಂದಿದ್ದ ಕೋವಿಯಲ್ಲಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ರಾಮಚಂದ್ರ ಕಳೆದ ರಾತ್ರಿ ಕುಡಿದು ಬಂದಿದ್ದು, ಊಟ ಮಾಡಿದ ಬಳಿಕ ಕ್ಷುಲ್ಲಕ ಕಾರಣಕ್ಕೆ ಪತ್ನಿ ಹಾಗೂ ಪುತ್ರನೊಡನೆ ಜಗಳ ಆರಂಭಿಸಿದ್ದು, ಬಳಿಕ ಗಲಾಟೆ ವಿಪರೀತವಾಗಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ.
ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ರಾಮಚಂದ್ರ ತಾನು ಪರವಾನಗಿ ಹೊಂದಿದ್ದ ಕೋವಿಯಿಂದ ಹಿರಿಯ ಮಗ ಪ್ರಶಾಂತ್ ಗೆ ಗುರಿಯಿಟ್ಟಿದ್ದು ಇದನ್ನು ತಪ್ಪಿಸಲು ಪತ್ನಿ ವಿನೋದ ಕೋವಿಯನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಈ ಸಂದರ್ಭ ಕೋವಿಯನ್ನು ಆಕೆಯ ಮೇಲೆ ಗುರಿಯಿರಿಸಿ ಗುಂಡಿಕ್ಕಿದ್ದು, ಘಟನೆಯಿಂದ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಪತ್ನಿ ಮೃತಪಟ್ಟ ಬಳಿಕ ಪತಿ ರಾಮಚಂದ್ರ ರಬ್ಬರ್ ಶೀಟ್ ಮಾಡಲು ಬಳಸುವ ???ಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮಹಜರು ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸಂಬAಧ ಮಗ ಪ್ರಶಾಂತ್ ಹೇಳಿಕೆಯಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.