ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಿಳಿಯೂರಿನ ತಿಪ್ಪಕೋಡಿ ಮನೆಯಂಗಳದಲ್ಲಿ ಜ.22ರಂದು ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್
ಉಪ್ಪಿನಂಗಡಿ : ಬಿಳಿಯೂರಿನ ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಯವರ ಮನೆಯಂಗಳದಲ್ಲಿ ಜ.22ರ ಸಂಜೆ 6 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.
ಅಪರಾಹ್ನ 3.30ರಿಂದ 5.30ರವರೆಗೆ ಶ್ರೀ ದುರ್ಗಾ ಮಹಾಲಕ್ಷ್ಮೀ ಭಜನಾ ಮಂಡಳಿ ಶ್ರೀಧಾಮ ಮಾಣಿಲದವರಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ ಶ್ರೀ ದೇವಿಯ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಲಿದೆ.