Recent Posts

Sunday, January 19, 2025
ಕ್ರೈಮ್ಬೆಂಗಳೂರುಸುದ್ದಿ

ಕುಡಿತ ಬಿಡುವಂತೆ ಬುದ್ಧಿವಾದ ಹೇಳಿದ ಅಪ್ಪನ ಕೊಂದು ಪರಾರಿಯಾಗಿದ್ದವನ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ಮದ್ಯ ಸೇವಿಸದಂತೆ ಬುದ್ಧಿವಾದ ಹೇಳಿದ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹತ್ಯೆಗೈದಿದ್ದ ಪುತ್ರನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರ 4ನೇ ಬ್ಲಾಕ್‌ ನಿವಾಸಿ ರಘು (29) ಬಂಧಿತ ಆರೋಪಿ. ಈತ ಜ.10ರಂದು ತಂದೆ ಜಿ.ರಾಮಚಂದ್ರ (59) ಅವರ ಜೊತೆ ಜಗಳ ತೆಗೆದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಏನಿದು ಪ್ರಕರಣ?: ಹತ್ಯೆಯಾದ ರಾಮಚಂದ್ರ ಪತ್ನಿ ಹಾಗೂ ಪುತ್ರ ರಘು ಜೊತೆಗೆ ರಾಜಾಜಿನಗರ 4ನೇ ಬ್ಲಾಕ್‌ನಲ್ಲಿ ವಾಸವಾಗಿದ್ದರು. ಕಳೆದ 30 ವರ್ಷಗಳಿಂದ ಲಾರಿ ಚಾಲಕನಾಗಿ ರಾಮಚಂದ್ರ ಕೆಲಸ ಮಾಡುತ್ತಿದ್ದರು. ಇನ್ನು ಮದ್ಯ ವ್ಯಸನಿಯಾಗಿರುವ ಪುತ್ರ ರಘು ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಮದ್ಯ ಸೇವಿಸಲು ಹಣ ಕೊಡುವಂತೆ ಪೋಷಕರಿಗೆ ಪೀಡಿಸುತ್ತಿದ್ದ. ಈತನ ಕಿರುಕುಳದಿಂದ ತಂದೆ-ತಾಯಿ ಸಾಕಷ್ಟು ಬೇಸತ್ತಿದ್ದರು.

ಈ ಮಧ್ಯೆ ಜ.10ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದ ರಘು, ತಂದೆ ರಾಮಚಂದ್ರ ಜತೆಗೆ ಜಗಳ ತೆಗೆದಿದ್ದಾನೆ. ಈ ಸಂದರ್ಭದಲ್ಲಿ ರಾಮಚಂದ್ರ ಮದ್ಯ ಸೇವಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅದರಿಂದ ಮತ್ತಷ್ಟು ಕೋಪಗೊಂಡ ರಘು ಕಬ್ಬಿಣದ ರಾಡ್‌ನಿಂದ ತಂದೆ ರಾಮಚಂದ್ರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ರಾಮಚಂದ್ರ ಕುಸಿದು ಬಿದ್ದು ತೀವ್ರ ರಕ್ತಸ್ರವಾದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಳಿಕ ಆರೋಪಿ ರಘು ಸ್ಥಳದಿಂದ ಪರಾರಿಯಾಗಿದ್ದ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದರು. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ರಾಜಾಜಿನಗರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿ ರಘುನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.