Monday, January 20, 2025
ಸುದ್ದಿ

ಮಲ್ಲೇಶ್ವರಂನ ಬಿಜೆಪಿ ಕಚೇರಿಯತ್ತ ಅನಂತ್ ಕುಮಾರ್ ಪಾರ್ಥಿವ ಶರೀರ – ಕಹಳೆ ನ್ಯೂಸ್

ಕೇಂದ್ರ ಸಚಿವ ಅನಂತ್ ಕುಮಾರ್ ಪಾರ್ಥೀವ ಶರೀರದ ಮೆರವಣಿಗೆ ಆರಂಭವಾಗಿದ್ದು, ಬಸವನಗುಡಿಯಲ್ಲಿರುವ ಅನಂತ್ ಕುಮಾರ್ ನಿವಾಸದಿಂದ ಮಲ್ಲೇಶ್ವರಂನ ಬಿಜೆಪಿ ಕಚೇರಿಯತ್ತ ಅಂತಿಮ ಯಾತ್ರೆ ಹೊರಟಿದೆ.

ಬೆಳಗ್ಗೆ 9 ರವರೆಗೆ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ 9.30 ರ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ದೊರೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲಿಂದ 1 ಗಂಟೆ ನಂತರ ಚಾಮರಾಜಪೇಟೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿಸಿಪಿ ಅಣ್ಣಾಮಲೈ ನೇತೃತ್ವದಲ್ಲಿ ಭದ್ರತೆ ಒದಗಿಸಿದ್ದರೆ,ಇತ್ತ ಚಾಮರಾಜಪೇಟೆಯಲ್ಲಿ ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಭದ್ರತೆ ನೀಡಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು