Monday, January 20, 2025
ಮಂಡ್ಯಸುದ್ದಿ

ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಭೀಕರ ಅಪಘಾತ : `KSRTC’ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ.!- ಕಹಳೆ ನ್ಯೂಸ್

ಮಂಡ್ಯ :ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ.

ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ KA- 10-F0520 ಬಸ್ ರುದ್ರಾಕ್ಷಿಪುರ ಗ್ರಾಮದ ಬಳಿ 8.45 ರ ವೇಳೆ ತೆರಳುತ್ತಿದ್ದಾಗ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು