Monday, January 20, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಂಗಳೂರಲ್ಲಿ  ಭೀಕರ ಸರಣಿ ಅಪಘಾತ : ಪವಾಡ ಸದೃಶವಾಗಿ ಕಾರು ಚಾಲಕ ಪಾರು…!-ಕಹಳೆ ನ್ಯೂಸ್

ಬೆಂಗಳೂರು : ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪವಾಡ ಸದೃಶವಾಗಿ ಕಾರು ಚಾಲಕ ಪಾರಾಗಿದ್ದಾನೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಈ ಅಪಘಾತ ಸಂಭವಿಸಿದೆ.


ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ನಂತರ ಕಾರಿಗೆ ಹಿಂಬದಿಯಿಂದ ಬಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪವಾಡ ಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಕಾರು ಚಾಲಕ ಪಾರಾಗಿದ್ದಾನೆ. ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು