Tuesday, April 8, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ ; ಘೋಷಣೆ ಕೂಗಿ ಪ್ರತಿಭಟನೆ -ಕಹಳೆ ನ್ಯೂಸ್

ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.ಈ ವೇಳೆ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.

ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್ ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಜೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಕೆ ಇದೇ ಮುಂತಾದ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನಾ ಸಭೆಯಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಕಾಪು ತಹಸಿಲ್ದಾರ್ ಪ್ರತಿಭಾ ಆರ್ ಮತ್ತು ನೂರಾರು ಜನರು ಉಪಸ್ಥಿತರಿದ್ದು, ಪ್ರತಿಭಟನೆಯಲ್ಲಿ ಭಾಗಿಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ