Thursday, January 23, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಅನಘ.ಕೆ.ಎನ್ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘ.ಕೆ.ಎನ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಇವರು SIT ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ
ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ ೨೪ ರಿಂದ ೨೮ರ ವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ
ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರಿಗೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು