Friday, January 24, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ : ದಾಳಿ ನಡೆಸಿದ ಪ್ರಸಾದ್ ಅತ್ತಾವರ ನೇತೃತ್ವದ ರಾಮಸೇನಾ ಕಾರ್ಯಕರ್ತರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಅನೈತಿಕ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ರಾಮ ಸೇನಾ ಸಂಘಟನೆಯ 9 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆ ಕಾರ್ಯಕರ್ತರು ನಗರದ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ದಾಳಿ ಮಾಡಿ ಪರಾರಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದಾಳಿ ಬಳಿಕ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದು, ಇದೀಗ ಉಳಿದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು