Friday, January 24, 2025
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ- ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದು, ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಬಂದ ಬಳಿಕವಷ್ಟೇ ದೃಢವಾಗಬೇಕಿದೆ. ಈ ನಡುವೆ ಮಂಗಳೂರಿನಲ್ಲಿ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ದೃಢವಾಗಿದೆ.


40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ತೀವ್ರ ಜ್ವರ ಹಾಗೂ ಮೈಮೇಲೆ ಗುಳ್ಳೆಗಳು ಕಾಣಿಸಿಕೊಂಡಿದ್ದವು. ಪುಣೆಯ ಎನ್ ಐವಿ ಲ್ಯಾಬ್ ನಲ್ಲಿ ಸೋಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

14 ವರ್ಷಗಳಿಂದ ದುಬೈನಲ್ಲಿ ವಾಸವಾಗಿದ್ದ ವ್ಯಕ್ತಿ ಜನವರಿ 17ರಂದು ಮಂಗಳೂರಿಗೆ ಆಗಮಿಸಿದ್ದರು. ಸದ್ಯ ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿ ಐಸೋಲೇಷನ್ ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಕಂಡುಬಂದ ಶಂಕಿತ ವ್ಯಕ್ತಿ ಕೂಡ ದುಬೈನಿಂದ ಬೆಂಗಳೂರಿಗೆ ಬಂದವರಾಗಿದ್ದಾರೆ.