Friday, January 24, 2025
ರಾಜ್ಯಸಂತಾಪಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮೂವರು ಸಾವು-ಇಬ್ಬರಿಗೆ ಗಾಯ-ಕಹಳೆ ನ್ಯೂಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಶುಕ್ರವಾರ (ಜ.24) ಬೆಳಗಿನ ಜಾವ ನಡೆದಿದೆ.

ಮೃತರನ್ನು ವಿಜಯಪುರ ನಗರದ ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನುಳಿದ ರಾಜು ಕಾಂಬಳೆ ಮತ್ತು ಪೋಳ ಎಂಬುವರು ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.