Recent Posts

Sunday, January 19, 2025
ಸುದ್ದಿ

ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ದಂಧೆ: ಕಾಂಗ್ರೆಸ್ ಕಾರ್ಪೋರೇಟರ್ ಅರೆಸ್ಟ್ – ಕಹಳೆ ನ್ಯೂಸ್

ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತು ಆತನ ಸ್ನೇಹಿತರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಜಾಲದ ಖಚಿತ ಮಾಹಿತಿಯನ್ನು ಆಧರಿಸಿ ಮಲೆಬೆನ್ನೂರು ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಅಬ್ದುಲ್ ಲತೀಫ್, ಸರ್ ಅಲಿ, ರಜಾಕ್, ನಧೀರ್ ನನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರದಿಂದ ಬಡವರಿಗೆ ಸೇರಬೇಕಿದ್ದ ನೂರಾರು ಕ್ವಿಂಟರ್ ಅನ್ನಭಾಗ್ಯದ ಅಕ್ಕಿ ಮಾರಾಟ ದಂಧೆಯನ್ನು ಅಬ್ದುಲ್ ಲತೀಫ್ ಹಾಗೂ ತಂಡ ಅಕ್ರಮವಾಗಿ ನಡೆಸುತ್ತಿದ್ದರು. ಕದ್ದ ಅಕ್ಕಿಯನ್ನು ಪಾಲಿಶ್ ಮಾಡಿಸಿ, ನಂತರ ಪ್ಯಾಕೇಟ್ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 17 ಟನ್ ಅನ್ನಭಾಗ್ಯದ ಅಕ್ಕಿ ಹಾಗೂ ಒಂದು ಲಾರಿಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ದಾಳಿಯು ಡಿಸಿಪಿ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ನಡೆದಿದ್ದು, ಆರೋಪಿಗಳ ಮೇಲೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.