Saturday, April 5, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಣಿ ಶಾಲೆಗೆ ಬೆಂಚ್ ಡಸ್ಕ್ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕು ಮಾಣಿ ವಲಯದ ಕರ್ನಾಟಕ ಪ್ರೌಢ ಶಾಲೆಗೆ ಸಮುದಾಯದ ಅಭಿವೃದ್ಧಿ ಜ್ಞಾನ ದೀಪ ಕಾರ್ಯಕ್ರಮದಡಿ. ಮಂಜೂರಾದ ಬೆಂಚು ಡೆಸ್ಕ್ ನ್ನು ವಿಟ್ಲ ಯೋಜನಾಧಿಕಾರಿ ರಮೇಶ್ ರವರು ವಿತರಿಸಿ ಶಿಕ್ಷಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆಗಳ ಬಗ್ಗೆ ತಿಳಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಂಚಾಲಕರಾದ ಹಾಜಿ ಇಬ್ರಾಹಿಂ ಕೆ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಹರೀಶ್ ಮಾಣಿ, ಶಾಲಾ ಮುಖ್ಯ ಶಿಕ್ಷಕರಾದ ಚೆನ್ನಪ್ಪ ಗೌಡ, ಸಾರಿಕಾ ಸಹ ಶಿಕ್ಷಕರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಲಾಯ್ಲಾಬಿ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ