ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇದರ ರಾಜ್ಯಶಾಸ್ತç ವಿಭಾಗ, ಮತದಾರರ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
15ನೇ ರಾಷ್ಟಿçÃಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ನುಡಿದರು. ರಾಜ್ಯಶಾಸ್ತç ವಿಭಾಗ ಮುಖ್ಯಸ್ಥರಾದ ಡಾ. ಮಮತಾ ಕೆ. ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಮತದಾನದ ದಿನಾಚರಣೆಯ ಔಚಿತ್ಯತೆಯ ಬಗ್ಗೆ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.