ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇದರ ಪ್ರಥಮ ವರ್ಷದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೆದಂಬಾಡಿಯಲ್ಲಿ “ಕಲಾ ಕಲರವ” ಕಾರ್ಯಕ್ರಮ -ಕಹಳೆ ನ್ಯೂಸ್
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಪ್ರಥಮ ವರ್ಷದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೆದಂಬಾಡಿಯಲ್ಲಿ “ಕಲಾ ಕಲರವ” ಕಾರ್ಯಕ್ರಮ ನಡೆಸಲಾಯಿತು.
ಪ್ರಸ್ತುತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ, ಕೆದಂಬಾಡಿ ಇದರ Sಆಒಅ ಅಧ್ಯಕ್ಷರಾದ ಶ್ರೀ ಕೃಷ್ಣಕುಮಾರ್ ಇದ್ದ್ಯಪ್ಪೆ ಇವರು ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಕೆಯ್ಯೂರು ಇಲ್ಲಿನ ಚಿತ್ರಕಲಾ ಶಿಕ್ಷಕರಾದ ಶ್ರೀ ಪ್ರಕಾಶ್ ವಿಟ್ಲ ಇವರು ಆಗಮಿಸಿದರು. ದ.ಕ.ಜಿ.ಪಂ.ಹಿ.ಪ್ರಾ.ಶಾಲೆ, ಕೆದಂಬಾಡಿ ಇಲ್ಲಿನ ಮುಖ್ಯಶಿಕ್ಷಕರಾದ ಶ್ರೀಮತಿ ನಾಗವೇಣಿ.ಕೆ ಹಾಗೂ ಸಹ ಶಿಕ್ಷಕಿಯಾದ ಶ್ರೀಮತಿ ಜಾನಕಿ ಬಿ.ಎಸ್ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಕೃಷ್ಣಕುಮಾರ್ ಇದ್ದ್ಯಪ್ಪೆ ಅವರು ಈಗಿನ ಡಿಜಿಟಲ್ ಯುಗದಲ್ಲಿ ಮಕ್ಕಳ ಗಮನ ಇಂತಹ ಕರಕುಶಲ ಚಟುವಟಿಕೆಗಳ ಕಡೆಗೆ ಸೆಳೆಯುವ ಅವಶ್ಯಕತೆಯನ್ನು ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರಕಾಶ್ ವಿಟ್ಲ ಅವರು ಮಕ್ಕಳನ್ನುದ್ದೇಶಿಸಿ ಸ್ಪೂರ್ತಿದಾಯಕ ನುಡಿಗಳನ್ನಾಡಿದರು. ಸಭಾ ಕಾರ್ಯಕ್ರಮದ ನಂತರ ಅವರು ಮಕ್ಕಳಿಗೆ ಬಣ್ಣದ ಕಾಗದಗಳನ್ನು ಉಪಯೋಗಿಸಿ ಮಾಡಬಹುದಾದ ಕರಕುಶಲ ವಸ್ತುಗಳನ್ನು ಮಾಡುವ ವಿಧಾನವನ್ನು ತೋರಿಸಿಕೊಟ್ಟರು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದಂತಹ ಕಾರ್ಯಕ್ರಮದಲ್ಲಿ ಕೆದಂಬಾಡಿ ಶಾಲೆಯ ಒಂದರಿAದ ಏಳನೇ ತರಗತಿವರೆಗಿನ ಮಕ್ಕಳು ಚತುರತೆಯಿಂದ ಭಾಗವಹಿಸಿದರು.
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಪೂಜಾ.ಎಮ್ ಕಾರ್ಯಕ್ರಮವನ್ನು ನಿರೂಪಿಸಿ, ಲವಿತ್ ಕುಮಾರ್.ಕೆ ಅತಿಥಿಗಳನ್ನು ಸ್ವಾಗತಿಸಿದರು.
ಸಂತ ಫಿಲೋಮಿನಾ ಕಾಲೇಜು ಇಲ್ಲಿನ ಪ್ರಥಮ ವರ್ಷದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿಯಾದ ಸ್ನೇಹಾ ರೋಸ್ ಜೇಕಬ್ ಇವರು ಧನ್ಯವಾದ ಸಮರ್ಪಣೆ ಮಾಡಿದರು.