76 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಅವರು ‘ಎಕ್ಸ್ “ಪೋಸ್ಟ್ ನಲ್ಲಿ ತಿಳಿಸಿದ್ದಾರೆ. “ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯವಾಗಿ 75 ವರ್ಷಗಳ ವೈಭವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನ ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ. ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಮತ್ತು ಸದೃಢ ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ “ಎಂದು ಪ್ರಧಾನಿ ಹೇಳಿದರು.
ಈ ಬಾರಿಯ ಗಣರಾಜ್ಯೋತ್ಸವ ಆಚರಣೆ ವೀಶೇಷವಾಗಿದೆ. ಸಂವಿಧಾನದ 75 ವರ್ಷಗಳ ಅನುಷ್ಠಾನ ಮತ್ತು ಜನ ಭಾಗಿದಾರಿಯ ಮೇಲೆ ವಿಶೇಷ ಗಮನವನ್ನು ಕೇಂದ್ರೀಕರಿಸಿ, ಈ ವರ್ಷದ ಆಚರಣೆಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ, ಏಕತೆ, ಸಮಾನತೆ, ಅಭಿವೃದ್ಧಿ ಮತ್ತು ಮಿಲಿಟರಿ ಪರಾಕ್ರಮದ ವಿಶಿಷ್ಟ ಮಿಶ್ರಣವಾಗಿದೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ.