Tuesday, March 25, 2025
ಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ  ಗಣರಾಜ್ಯ ದಿನಾಚರಣೆ-ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಆದಿತ್ಯವಾರದಂದು ನೆರವೇರಿತು.
ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿವೃತ್ತ ಪ್ರೊ. ಜವರೇಗೌಡ, ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಕಾಲೇಜಿನ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ