Recent Posts

Monday, January 27, 2025
ಸುದ್ದಿ

 ದೇಶದ ಎರಡನೇ ಅತಿ ಎತ್ತರದ ಧ್ವಜಸ್ತಂಭದಿಂದ ಜಾರಿ ಬಿದ್ದ ತ್ರಿವರ್ಣ ಧ್ವಜ-ಕಹಳೆ ನ್ಯೂಸ್

ಹೊಸಪೇಟೆ : ಇಲ್ಲಿನ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿರುವ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ಗಣರಾಜ್ಯೋತ್ಸವ ನಡೆಯುತ್ತಿದ್ದ ವೇಳೆಯೇ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಖಾನ್ ಅವರು ಈ ಧ್ವಜವನ್ನು ಸಾಂಕೇತಿಕವಾಗಿ ಏರಿಸಿ ವೇದಿಕೆಗೆ ಬಂದು ಸಂಪ್ರದಾಯಿಕ ಧ್ವಜಾರೋಹಣ ನೆರವೇರಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಪರೇಡ್ ವೀಕ್ಷಿಸಿ ಪರೇಡ್ ತಂಡಗಳು ಪಥಸಂಚಲನದಲ್ಲಿ ನೀಡಿದ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ತ್ರಿವರ್ಣ ಧ್ವಜ ಒಮ್ಮಿಂದೊಮ್ಮೆಲೆ ಕುಸಿದು ಬಿತ್ತು. ಅದೃಷ್ಟವಶಾತ್ ಆ ಸಂದರ್ಭದಲ್ಲಿ ಧ್ವಜಸ್ತಂಭದ ಬುಡದಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿವರು ಭಾಷಣ ಕೊನೆಗೊಳಿಸಿದ ಬಳಿಕ, ಧ್ವಜ ಕುಸಿಯಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.