Wednesday, March 26, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

‘ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 2024 ಜನವರಿಯಲ್ಲಿ ಸತೀಶ್‌ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯ ಎಲ್ಲ ಮಂಡಲಗಳ ಅಧ್ಯಕ್ಷರ ಆಯ್ಕೆಗೆ ತಿಂಗಳ ಹಿಂದಷ್ಟೇ ಚುನಾವಣೆ ನಡೆದಿತ್ತು. ಜಿಲ್ಲೆಯ ಎಲ್ಲ ಮಂಡಲಗಳಿಗೂ ಈ ಹಿಂದೆ ನೇಮಕಗೊಂಡವರೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ