ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 8ನೇ ಬಜೆಟ್ ಮಂಡಿಸುತ್ತಿದ್ದು, ಮಹತ್ವದ ಘೋಷಣೆಗಳನ್ನು ಮಾಡಿದ್ಧಾರೆ. ಪ್ರಮುಖವಾಗಿ ಮೇಕ್ ಇನ್ ಇಂಡಿಯಾ ಯೋಜನೆಗೆ ಸಂಬಂಧಿಸಿದಂತೆ ಸಚಿವರು ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಿದ್ದು, ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.
ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್‌ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಧನಧಾನ್ಯ ಯೋಜನೆಯಡಿ ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.