ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್
ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ. ಸರ್ಕಾರ ರಾಜ್ಯಗಳೊಂದಿಗೆ ಸಹಭಾಗಿತ್ವದಲ್ಲಿ 100 ಜಿಲ್ಲೆಗಳನ್ನು ಒಳಗೊಂಡಿರುವಂತೆ ಈ ಯೋಜನೆ ರೈತಾಪಿ ವರ್ಗಕ್ಕೆ ಬಹಳ ಅನುಕೂಲವಾಗಲಿದೆ ಎಂದು ಹೇಳಿದರು.