ಮುಂಬೈ: ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ(ಫೆ.2) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಲಿವುಡ್ ಸಿಂಗರ್ ಸೋನು ನಿಗಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಭಾನುವಾರ ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ನಡುವೆಯೇ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿವೆ.
ಭಾನುವಾರ ಸಂಗೀತ ಕಾರ್ಯಕ್ರಮದ ವೇಳೆ ತೀವ್ರ ತರನಾದ ಬೆನ್ನು ನೋವಿನೊಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು ಆದರೂ ತಮ್ಮ ಪ್ರದರ್ಶನವನ್ನು ಮುಂದುವರೆಸಿದ್ದರು ಆದರೆ ಕಾರ್ಯಕ್ರಮ ಮುಂದುವರೆದಂತೆ ಬೆನ್ನು ನೋವು ತೀವ್ರವಾದ ಪರಿಣಾಮ ಸಂಗೀತ ಕಾರ್ಯಕ್ರಮದ ನಡುವೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.