Recent Posts

Monday, February 3, 2025
ಉಡುಪಿಜಿಲ್ಲೆಸುದ್ದಿ

ನಕ್ಸಲ್ ತೊಂಬಟ್ಟುವಿನ ಲಕ್ಷ್ಮೀ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗತಿ-ಕಹಳೆ ನ್ಯೂಸ್

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಕಳೆದ 20 ವರ್ಷಗಳಿಂದ ತೊಡಗಿಸಿಕೊಂಡು ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ  ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ.

ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರಾದ ಶ್ರೀಪಾಲ ಇದ್ದರು. ಎಸ್ ಪಿ ಡಾ.ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆಯು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು