Wednesday, March 26, 2025
ಕಡಬಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಡಬ:ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ರಥ ಸಪ್ತಮಿ 2025-ಕಹಳೆ ನ್ಯೂಸ್

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆ ಜಂಟಿಯಾಗಿ ಹನುಮಾನ್‌ನಗರ, ಕೇವಳ, ಕಡಬ ಇಲ್ಲಿ ಫೆಬ್ರವರಿ 4 ರಂದು ರಥ ಸಪ್ತಮಿ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಆಂಗ್ಲಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ವಹಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಬೇಕು’
ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸೌಮ್ಯ ಕೆ ಎ ಇವರು ರಥಸಪ್ತಮಿಯ ಮಹತ್ವವನ್ನು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಸರಸ್ವತೀ ವಿದ್ಯಾಲಯದ ಕನ್ನಡ ಮಾಧ್ಯಮ ವಿಭಾಗದ ಕೋಶಾಧಿಕಾರಿ ಲಿಂಗಪ್ಪ ಜೆ ಹಾಗೂ ಪ್ರೌಢ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು. ಮೈದಾನದಲ್ಲಿ ವಿದ್ಯಾರ್ಥಿಗಳಿಂದ 13 ಮಂತ್ರ ಸಹಿತ ಸೂರ್ಯ ನಮಸ್ಕಾರದ ಪ್ರಾತ್ಯಕ್ಷಿಕೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈಸಂದರ್ಭದಲ್ಲಿ ಎರಡೂ ವಿಭಾಗಗಳ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಸ್ವತೀ ಆಂಗ್ಲಮಾಧ್ಯಮ ವಿಭಾಗದ ಕುಮಾರಿ ಶ್ವೇತಾ ಸ್ವಾಗತಿಸಿ, ಆಂಗ್ಲಮಾಧ್ಯಮ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸತೀಶ್ಚಂದ್ರ ಕೆ ಎಸ್ ವಂದಿಸಿದರು. ಪ್ರಾತ್ಯಕ್ಷಿಕೆಯನ್ನು ಕನ್ನಡ ಮಾಧ್ಯಮದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಲಕ್ಷಿ್ಮೀಶ ಗೌಡ ಆರಿಗ ನಡೆಸಿಕೊಟ್ಟರು. ಕುಮಾರಿ ಕಾವ್ಯಶ್ರೀ ಡಿ ಕಾರ್ಯಕ್ರಮವನ್ನು ನಿರೂಪಿಸಿದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ