ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ನಡೆದ “ನವಚಂಡೀ ಯಾಗ ಧಾರ್ಮಿಕ ಸಭಾ” ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್
ಕಾಪು: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ಇಂದು ದಿನಾಂಕ 04-02-2025 ರಂದು ದೇವಳದಲ್ಲಿ ನಡೆದ “ನವಚಂಡೀ ಯಾಗ ಧಾರ್ಮಿಕ ಸಭಾ” ಕಾರ್ಯಕ್ರಮದಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಅಧ್ಯಕ್ಷತೆ ವಹಿಸಿದ್ದರು.
ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಶ್ರೀಧಾಮ ಮಣಿಲಾ ಬಂಟ್ವಾಳದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ್ ಶೆಟ್ಟಿ, ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಹೆಗ್ಡೆ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ನಿ)ಮAಗಳೂರು ಅಧ್ಯಕ್ಷರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ(ನಿ)ಬೆAಗಳೂರು ಅಧ್ಯಕ್ಷರಾದ ಎಂ ಎನ್ ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದ್ಯಸರಾದ ಡಾ. ಮಂಜುನಾಥ್ ಭಂಡಾರಿ, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.