ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಸವಿತಾ ಸಮಾಜ ರಿ. ಇವರ ಸಹಯೋಗದಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ 2025 ದಿನಾಚರಣೆ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಸವಿತಾ ಸಮಾಜದ ಮಹಾನ್ ಪುರುಷ ಸವಿತಾ ಮಹರ್ಷಿಯವರ ಜೀವನ ಸಂದೇಶ ಸರ್ವರಿಗೂ ಆದರ್ಶವಾಗಲಿ ಎಂದು ಹಾರೈಸಿದರು.
ಸಮಾರಂಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ, ಸವಿತಾ ಸಮಾಜದ ಪ್ರಮುಖರಾದ ಶ್ರೀ ನಿಂಜೂರು ವಿಶ್ವನಾಥ ಭಂಡಾರಿ, ಶ್ರೀ ಸದಾಶಿವ ಬಂಗೇರ ಕುರ್ಕಾಲು, ಶ್ರೀ ಗೋವಿಂದ ಭಂಡಾರಿ ಬನ್ನಂಜೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.