Saturday, February 8, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಪೂರ್ವ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 1999ರಲ್ಲಿ ಹಾಗೂ ಮಂಗಳೂರು ಉತ್ತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2012ರಲ್ಲಿ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ನಾಟೆಕಲ್‌ ಸರಕಾರಿ ಆಸ್ಪತ್ರೆ ಬಳಿಯ ನಿವಾಸಿಯಾಗಿದ್ದು, ಹಾಲಿ ಕಡಬ ತಾಲೂಕಿನ ಕೊಳೆ³ ಮನೆಯಲ್ಲಿ ವಾಸವಾಗಿದ್ದ ಅಬ್ದುಲ್‌ ಹಮೀದ್‌ (50) ಬಂಧಿತ. ಧರ್ಮಸ್ಥಳ ಬಳಿಯಿಂದ ಆತನನ್ನು ವಶಕ್ಕೆ ಪಡೆದು ಮಂಗಳೂರು ಪೂರ್ವ ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಉತ್ತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಕಾರಿನ ಡೋರ್‌ ತೆರೆದು ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿರುವುದು ಸಹಿತ ಒಟ್ಟು 3 ಪ್ರಕರಣಗಳು ಈತನ ಮೇಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು