ನೆಲ್ಯಾಡಿ: ಕಾರು – ದ್ವಿಚಕ್ರ ವಾಹನ ನಡುವೆ ಅಪಘಾತ : ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಮಾಜಿ ಸಂಸದ ನಳಿನ್ ಕಟೀಲ್ – ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/IMG-20250208-WA0013-750x450.webp)
ನೆಲ್ಯಾಡಿ : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ ನಡೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
ಬೆಂಗಳೂರಿನಿAದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಶಿರಾಡಿಯಲ್ಲಿ ಅಪಘಾತವಾಗಿದೆ. ತುರ್ತು ಕಾರ್ಯಕ್ರಮದ ನಿಮಿತ್ತ ಅದೇ ದಾರಿಯಿಂದ ತೆರಳುತ್ತಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದ ಮೂಲಕ ಗಾಯಾಳುವನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಲ್ಲದೆ, ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಕುಶಲೋಪರಿ ವಿಚಾರಿಸಿದರು.