ಪುತ್ತೂರಿನಲ್ಲಿ ಅಕ್ರಮ ಗೋಸಾಗಾಟ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ – ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/wmremove-transformed-750x450.jpeg)
ಪುತ್ತೂರು : ಪಿಕಪ್ ವಾಹನದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋ ಸಾಗಾಟವನ್ನು ತಡೆದು, ಗೋವುಗಳನ್ನು ರಕ್ಷಿಸಿದ ಘಟನೆ ಇಂದು ರಾತ್ರಿ ಸುಮಾರು 8.30ರ ವೇಳೆಗೆ ದಾರಂದಕುಕ್ಕುವಿನಲ್ಲಿ ನಡೆದಿದೆ.
ಬಲ್ನಾಡಿನ ಜಾತ್ತಪ್ಪ ಗೌಡ ಎಂಬವರ ಮನೆಯಿಂದ ಅಕ್ರಮ ಗೋ ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ದಾರಂದಕುಕ್ಕು ಎಂಬಲ್ಲಿ ಪಿಕಪ್ ವಾಹನವನ್ನು ತಡೆದು, ಗೋವುಗಳನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪಿಕಪ್ ವಾಹನ ಹಾಗೂ ಓರ್ವನನ್ನು ವಶಕ್ಕೆ ಪಡೆದು, ಗೋವುಗಳನ್ನು ಗೋಶಾಲೆಗೆ ಸ್ಥಳಾಂತರಿಸಿದ್ದಾರೆ.