Tuesday, April 1, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ. ಕ. ಜಿ. ಪಂ. ಕಿ. ಪ್ರಾ. ಶಾಲೆ ಏಮಾಜೆಯಲ್ಲಿ ಅನಾವರಣ ವಿಶೇಷ ಸ್ಪರ್ಧಾ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುದ್ನೂರು ಗ್ರಾಮದ ದ. ಕ. ಜಿ. ಪಂ. ಕಿ. ಪ್ರಾ. ಶಾಲೆ ಏಮಾಜೆ ಇಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅನಾವರಣ ವಿಶೇಷ ಸ್ಪರ್ಧಾ ಕಾರ್ಯಕ್ರಮವು ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿಯಾದ ಡಾ.ತ್ರಿವೇಣಿ ರಮೇಶ್ ದೀಪ ಪ್ರಜ್ವಲನ ಮೂಲಕ ಕಾರ್ಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಚಲನಚಿತ್ರ ನಟ ಹಾಗೂ ನಾಟಕ ಕಲಾವಿದರಾದ ಚಂದ್ರಹಾಸ ಶೆಟ್ಟಿ, ಉದ್ಯಮಿಯಾದ ಗಣೇಶ್ ಪೂಜಾರಿ ಮತ್ತು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಶ್ಮಿತಾ ಸುರೇಶ್ ಜೋಗಿಬೆಟ್ಟು ಪದಾಧಿಕಾರಿಗಳಾದ ಶಶಿಧರ ಏಮಾಜೆ, ರಾಕೇಶ್ ಪೊಳಲಿ, ಸುಚಿತ್ರ ಭಟ್ ಕಲ್ಲಡ್ಕ, ಹಿತೇಶ್ ಮಾಣಿ ಹಾಗೂ ಆಮಂತ್ರಣ ವೇದಿಕೆಯ ಜಿಲ್ಲಾ ಉಪಾಧ್ಯಕ್ಷೆ ವಿಂಧ್ಯಾ ಎಸ್ ರೈ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿ ಬಹುಮಾನವನ್ನು ವಿತರಿಸಲಾಯಿತು. ಜಿಲ್ಲಾ ಉಪಾಧ್ಯಕ್ಷೆ ವಿಂಧ್ಯಾ ಎಸ್ ರೈ ಪ್ರಸ್ತಾವನೆ ಮಾಡಿ, ಬಂಟ್ವಾಳ ಘಟಕದ ಕಾರ್ಯದರ್ಶಿ ಶಶಿಧರ ಏಮಾಜೆ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸ್ವಾಗತಿಸಿ, ವಂದಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ