![](https://www.kahalenews.com/wp-content/uploads/2025/02/WhatsApp-Image-2025-02-09-at-3.55.50-PM-750x450.jpeg)
ಉಜಿರೆ: ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತ ಆರೋಗ್ಯ ವ್ಯವಸ್ಥೆ ಬೆಳವಣಿಗೆಗೆ ಪೂರಕ. ಉಜಿರೆಯಂತಹ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅಗತ್ಯವಾದ ಸುಸಜ್ಜಿತ ಆಸ್ಪತ್ರೆಯನ್ನು ಕಟ್ಟಿ ಬೆಳೆಸಿದ ಡಾ.ಗೋಪಾಲಕೃಷ್ಣ ದಂಪತಿಗಳ ತ್ಯಾಗ ಮತ್ತು ಸೇವೆ ಅನನ್ಯವಾದುದು. ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ ನೀಡಿರುವುದರಿಂದ ಬೆನಕ ಜನರ ಆಯ್ಕೆಯ ಆಸ್ಪತ್ರೆಯಾಗಿ ಬೆಳೆದು ನಿಂತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿಪ್ರಾಯಪಟ್ಟರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇತ್ತೀಚೆಗೆ ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಬೇಟಿ ನೀಡಿ ಅಲ್ಲಿನ ವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿ ಅಭಿನಂದಿಸಿ ಮಾತನಾಡುತ್ತಿದ್ದರು.
ಬೆನಕ ಆಸ್ಪತ್ರೆಯು ಸ್ಥಳೀಯ ಹಾಗೂ ಸಮಕಾಲೀನ ಅಗತ್ಯತೆಗಳಿಗೆ ಪೂರಕವಾದ ಸೇವೆಗಳ ಒದಗಣೆಗೆ ಆದ್ಯತೆ ನೀಡಿರುವುದು ಅಭಿನಂದನೀಯ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆನಕ ಆಸ್ಪತ್ರೆಯ ಪರವಾಗಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ, ಡಾ.ಭಾರತಿ, ಡಾ.ಆದಿತ್ಯ ರಾವ್, ಡಾ.ಅಂಕಿತಾ ಭಟ್ ಹಾಗೂ ಡಾ.ರೋಹಿತ್ ಜಿ.ಭಟ್ ಸಂಸದರನ್ನು ಗೌರವಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಆಸ್ಪತ್ರೆಯ ಸಿಬ್ಬಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮನ್ನು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ.ಭಟ್ ನಿರ್ವಹಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದರು.