ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಹಾಗೂ ರೋಟರಿ ಕ್ಲಬ್ ಪುತ್ತೂರು ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ; ಹಿರಿಯ ವೈದ್ಯರಿಗೆ ಸನ್ಮಾನ-ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/1739111280626-750x450.jpg)
ಅಡ್ಯನಡ್ಕ : ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಸ್ಥಳೀಯ ಸಂಘ ಸAಸ್ಥೆಗಳ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಹಿರಿಯ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವು ಜನತಾ ಹಿರಿಯ ಪ್ರಾಥಮಿಕ ಶಾಲಾ ಆವರಣ, ಅಡ್ಯನಡ್ಕ ಇಲ್ಲಿ ಫೆ. 9ರಂದು ನಡೆಯಿತು.
ಆರೋಗ್ಯ ತಪಾಸಣಾ ಶಿಬಿರವನ್ನು ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಅಡ್ಯನಡ್ಕ ಇದರ ಅಧ್ಯಕ್ಷ ಹಾಗೂ ರೋಟೇರಿಯನ್ ಗೋವಿಂದ ಪ್ರಕಾಶ ಸಾಯ ಉದ್ಘಾಟಿಸಿದರು. ರೋಟರಿ ಕ್ಲಬ್, ಪುತ್ತೂರು ಇದರ ಅಧ್ಯಕ್ಷರಾದ ರೋ.ಡಾ. ಶ್ರೀಪತಿ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯೇನಪೋಯಾ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರಾದ ಡಾ. ರೋಹನ್ ಶೆಟ್ಟಿ ಹಾಗೂ ಡಾ. ರಾಜೇಶ್ ಕೃಷ್ಣ ಪಾಲ್ಗೊಂಡು ಮಾತನಾಡಿದರು. ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಶುಭ ಹಾರೈಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಗಣ್ಯರಿಗೆ ಪುಸ್ತಕ ಸ್ಮರಣಿಕೆ ನೀಡಿದರು. ರೋಟರಿ ಕ್ಲಬ್ ಪುತ್ತೂರು ಇದರ ಕಾರ್ಯದರ್ಶಿ ರೋ. ದಾಮೋದರ್, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು ಹಾಗೂ ಜನತಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಡ್ಯನಡ್ಕ ಪರಿಸರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರಾದ ಡಾ.ಕೆ. ಸುಬ್ರಹ್ಮಣ್ಯ ಭಟ್, ಡಾ. ಶ್ರೀಕೃಷ್ಣ ಪೈಸಾರಿ ಹಾಗೂ ಡಾ. ವಿಶ್ವೇಶ್ವರ ಭಟ್ ಅವರನ್ನು ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜನತಾ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಂ. ಕುಂಞ ನಾಯ್ಕ ಸನ್ಮಾನ ಪತ್ರ ವಾಚಿಸಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ವಂದಿಸಿ, ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿದರು.
ಬೃಹತ್ ಆರೋಗ್ಯ ಶಿಬಿರದಲ್ಲಿ ಒಟ್ಟು 400 ಮಂದಿ ಫಲಾನುಭವಿಗಳು ವಿವಿಧ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ನೋಂದಾಯಿಸಿಕೊAಡು ಉಚಿತ ಪ್ರಯೋಜನ ಪಡೆದರು. 33 ಮಂದಿ ರಕ್ತದಾನ ಮಾಡಿದ್ದು, 45 ಮಂದಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ನಡೆಸಲಾಗಿದೆ. ರಕ್ತ ವರ್ಗೀಕರಣ ಮತ್ತು ರಕ್ತದಾನ, ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಕಿಡ್ನಿ ಸಂಬAಧಪಟ್ಟ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಮಾರ್ಗದರ್ಶನ, ಬಾಯಿಯ ತಪಾಸಣೆ ಮತ್ತು ದಂತ ಚಿಕಿತ್ಸೆ, ಬಿಪಿ, ಸಕ್ಕರೆ ಖಾಯಿಲೆ, ಇಸಿಜಿ, ಶ್ವಾಸಕೋಶ ತಪಾಸಣೆ ಮತ್ತು ಮಾಹಿತಿ, ಹೋಮಿಯೋಪತಿ ಮತ್ತು ಆಯುರ್ವೇದಿಕ್ ಚಿಕಿತ್ಸೆ, ಸ್ತನ ಕ್ಯಾನ್ಸರ್
ಮತ್ತು ಮೂತ್ರಜನಕಾಂಗದ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ, ಆಯುಷ್ಮಾನ್ ಕಾರ್ಡ್ ನೋಂದಾವಣೆ ಉಚಿತವಾಗಿ ನಡೆಯಿತು.
ಜನತಾ ಹಿರಿಯ ವಿದ್ಯಾರ್ಥಿಗಳ ಸಂಘ, ಕೇಪು ಗ್ರಾಮ ಪಂಚಾಯತು, ಪ್ರಾಥಮಿಕ ಆರೋಗ್ಯ ಕೇಂದ್ರ, ಅಡ್ಯನಡ್ಕ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೆರುವಾಯಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುಣಚ, ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪಸ್ವಾಮಿ ಭಜನಾ ಮಂದಿರ ಅಡ್ಯನಡ್ಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟ, ದಿವ್ಯಶಕ್ತಿ ಯುವಕ ಮಂಡಲ, ಕುದ್ದುಪದವು, ದಿವ್ಯಶಕ್ತಿ ಯುವತಿ ಮಂಡಲ, ಕುದ್ದುಪದವು, ಶ್ರೀಕೃಷ್ಣ ಯುವಕ ಸಂಘ ಕೂಟೇಲು, ನುಸ್ರತ್‌ಲ್ ಇಸ್ಲಾಂ ಯಂಗ್ ಮೆನ್ ಎಸೋಸಿಯೇಶನ್, ಅಡ್ಯನಡ್ಕ, ವಿಷ್ಣುಮೂರ್ತಿ ಯುವಕ ಮಂಡಲ, ಕೊಲ್ಲಪದವು, ಪುಣಚ ಸೇವಾ ಸಹಕಾರಿ ಸಂಘ, ಅಡ್ಯನಡ್ಕ ಶಾಖೆ, ಎಸ್.ಜಿ.ಆರ್. ಶಾಮಿಯಾನ ಅಡ್ಯನಡ್ಕ, ಶ್ರೀ ಗುರುರಾಘವೇಂದ್ರ ಭಜನಾ ಮಂದಿರ, ಬಾಕಿಲಪದವು ಪ್ರಹ್ಲಾದಪುರ, ಯಾದವ ಸಭಾ ತಾಲೂಕು ಸಮಿತಿ, ಬಂಟ್ವಾಳ – ಈ ಸ್ಥಳೀಯ ಸಂಸ್ಥೆ ಮತ್ತು ಸಂಘಟನೆಗಳ ಕಾರ್ಯಕರ್ತರು ಆರೋಗ್ಯ ಶಿಬಿರದ ಸಂಘಟನೆಯಲ್ಲಿ ಸಕ್ರಿಯವಾಗಿ ಸಹಕರಿಸಿದ್ದಾರೆ.
ಜನತಾ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸ್ಫೂರ್ತಿಗೀತೆ ಹಾಡಿದರು. ರೋಟರಿ ಕ್ಲಬ್ ಪುತ್ತೂರು, ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಆಡಳಿತ ಮಂಡಳಿ, ಹಿರಿಯ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘಟನೆಗಳು ಮತ್ತು ಸಂಸ್ಥೆಗಳು, ವೈದ್ಯಕೀಯ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಪರಿಶ್ರಮದಿಂದ ಆರೋಗ್ಯ ಶಿಬಿರವು
ಯಶಸ್ವಿಯಾಗಿ ಸಂಪನ್ನಗೊAಡಿತು. ಸಾರ್ವಜನಿಕರಿಗೆ ಉಪಾಹಾರ ಮತ್ತು ಶುಚಿರುಚಿಯಾದ ಭೋಜನವನ್ನು ವ್ಯವಸ್ಥೆಗೊಳಿಸಲಾಗಿತ್ತು.