Recent Posts

Sunday, January 19, 2025
ಸುದ್ದಿ

ಇಂದು ಮಂಗಳೂರಿಗೆ ಅಮಿತ್ ಶಾ ಭೇಟಿ: ಶಬರಿಮಲೆ ವಿವಾದ, ಅಯೋಧ್ಯೆ ಮಂದಿರ ಬಗ್ಗೆ ಚರ್ಚೆ – ಕಹಳೆ ನ್ಯೂಸ್

ಮಂಗಳೂರು:  ನಗರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಮಟ್ಟದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಶೇಷ ವರ್ಗದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಮಂಗಳೂರಿನ ಸಂಘನಿಕೇತನಕ್ಕೆ ಆಗಮಿಸುತ್ತಿದ್ದಾರೆ. ವರ್ಷಂಪ್ರತಿ ನಡೆಯುವ ಆರ್‍ಎಸ್‍ಎಸ್ ವಿಶೇಷ ವರ್ಗ ಈ ಬಾರಿ ದೇಶದ ಎರಡು ಕಡೆಗಳಲ್ಲಿ ನಡೆಯುತ್ತಿದೆ. ವಾರಾಣಸಿ ಮತ್ತು ಮಂಗಳೂರಿನಲ್ಲಿ ವಿಶೇಷ ವರ್ಗ ನಡೆಯುತ್ತಿದೆ.
ಭಾನುವಾರದಿಂದ ವಿಶೇಷ ವರ್ಗ ಆರಂಭವಾಗಿದ್ದು, ಸಂಘ ಹಾಗೂ ಸಂಘ ಪರಿವಾರ ಸಂಘಟನೆಗಳ ಸಂಘಟನಾತ್ಮಕ ದೃಷ್ಟಿಯಿಂದ ಚರ್ಚೆಗಳು ನಡೆಯಲಿವೆ. ಮಂಗಳೂರಿನ ಸಭೆಯು ಭಯ್ಯಾಜಿ ಜೋಶಿ ನೇತೃತ್ವದಲ್ಲಿ ನಡೆಯಲಿದೆ. ಅಮಿತ್ ಶಾ ಪಾಲ್ಗೊಳ್ಳುವ ವಿಶೇಷ ವರ್ಗದಲ್ಲಿ ಬಿಜೆಪಿ ಸಂಘಟನೆ ಹಾಗೂ ಪ್ರಸಕ್ತ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಹಾಗೂ ಮುಂದಿನ ಕಾರ್ಯಯೋಜನೆಗಳ ವಿಸ್ತೃತ ಚರ್ಚೆ ನಡೆಯಲಿದೆ.
ಮುಖ್ಯವಾಗಿ ಆರ್‍ಎಸ್‍ಎಸ್ ಆರಂಭಿಸಿದ ಅಯೋಧ್ಯೆ ಮಂದಿರ ನಿರ್ಮಾಣ ವಿಚಾರ, ಶಬರಿಮಲೆ ವಿವಾದ ಹಾಗೂ 2019ರ ಲೋಕಸಭಾ ಚುನಾವಣೆ ಬಗ್ಗೆ ಗಮನಾರ್ಹ ಚರ್ಚೆ ನಡೆಯುವ ಸಂಭವ ಇದೆ ಎನ್ನಲಾಗಿದೆ. ದೇಶದ 20ಕ್ಕೂ ಅಧಿಕ ರಾಜ್ಯಗಳಿಂದ ಪ್ರತಿದಿನ 200ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ವಿವಿಧ ಸಂಘಟನೆಗಳ ಪ್ರಮುಖರನ್ನು ವಿಶೇಷ ವರ್ಗಕ್ಕೆ ಆಹ್ವಾನಿಸಲಾಗಿದೆ. ಈ ವಿಶೇಷ ವರ್ಗ ನ.15 ರಂದು ಸಮಾಪನಗೊಳ್ಳಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು