ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭ-ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/WhatsApp-Image-2025-02-10-at-11.00.56-AM-750x450.jpeg)
ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಸಂಶೋಧಕ ಡಾ. ಮೋಹನ ಕುಂಟಾರರ ವ್ಯಕ್ತಿತ್ವ ಮತ್ತು ಸಾಹಿತ್ಯದ ಬಗ್ಗೆ ಡಾ. ಸುಭಾಷ್ ಪಟ್ಟಾಜೆಯವರು ಬರೆದ ‘ಬಹುಮುಖಿ’ ಎಂಬ ಕೃತಿಯು 17. 2. 2025ರಂದು ಮಧ್ಯಾಹ್ನ ೨ ಗಂಟೆಗೆ ಸರಿಯಾಗಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಕಾಲೇಜಿನ ಪ್ರಿನ್ಸಿಪಾಲರಾದ ಡಾ. ಮಹಮ್ಮದಾಲಿ ಅವರ ಅಧ್ಯಕ್ಷತೆಯಲ್ಲಿ, ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ. ವಿ. ಪರಮಶಿವಮೂರ್ತಿಯವರು ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ. ರಾಜಶೇಖರ ಹಳೆಮನೆಯವರು ಕೃತಿ ವಿಮರ್ಶೆ ಮಾಡಲಿದ್ದಾರೆ.