ಮುಡಾ ಕೇಸ್ ಕುರಿತು ‘ED’ ಇಂದ ಸಮನ್ಸ್ ಜಾರಿ ವಿಚಾರ : ಇಂದು ಹೈಕೋರ್ಟ್ ನಲ್ಲಿ ಸಿಎಂ ಪತ್ನಿ ರಿಟ್ ಅರ್ಜಿ ವಿಚಾರಣೆ-ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/download-2.jpg)
ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು.
ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಅನ್ನು ಪ್ರಶ್ನಿಸಿ, ಹೈಕೋರ್ಟಿಗೆ ಸಿಎಂ ಪತ್ನಿ ಪಾರ್ವತಿ ಅವರು ರಿಟ್ ಅರ್ಜಿ ಸಲ್ಲಿಸಿದ್ದು ಇಂದು ಮಧ್ಯಾಹ್ನ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದೆ.
ಹೌದು ಇಂದು ಧಾರವಾಡದ ಹೈಕೋರ್ಟ್ ಪೀಠದಲ್ಲಿ ಸಿಎಂ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಅರ್ಜಿಯ ವಿಚಾರಣೆ ಕೂಡ ಇಂದು ನಡೆಯಲಿದೆ. ಮುಡಾ ಸೈಟ್ ಹಂಚಿಕೆ ಸಂಬಂಧ ಜಾರಿ ನಿರ್ದೇಶನಲಯ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಸಮನ್ಸ್ ನೀಡಿತ್ತು. ಜಾರಿ ನಿರ್ದೇಶನಾಲಯದ ಸಮನ್ಸ್ ರದ್ದು ಕೋರಿ ಇಬ್ಬರು ಸಹ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದರು. ಇಡಿ ಸಮನ್ಸ್ ಗೆ ಇಂದಿನವರೆಗೆ ಹೈಕೋರ್ಟ್ ಕಳೆದ ವಿಚಾರಣೆ ವೇಳೆ ತಡೆಯಾಜ್ಞೆ ನೀಡಿತ್ತು. ಹಾಗಾಗಿ ಇಂದು ಮಧ್ಯಾಹ್ನ 2:30ಕ್ಕೆ ನ್ಯಾ. ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.