![](https://www.kahalenews.com/wp-content/uploads/2025/02/WhatsApp-Image-2025-02-09-at-10.58.18-PM.jpeg)
ಬಂಟ್ವಾಳ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು ಬಲಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ.
ಇನ್ನೋವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಕಾರು ಅಪಘಾತದಲ್ಲಿ ನಾಲ್ಕು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.