ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ-ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/WhatsApp-Image-2025-02-11-at-10.38.54-AM.jpeg)
ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ ಗೆಲುವು ಸಾಧಿಸಿದರು. ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ರಾಮ್ ಕಿಶನ್ ಹೆಗ್ಡೆ, ಕೃಷ್ಣ ಪೂಜಾರಿ, ನಟರಾಜ, ಅನುಪಮ ಶೆಟ್ಟಿ, ಅಶೋಕ್ ಶ್ರೀಯಾನ್, ವಿಕಾಸ ಹೆಗ್ಡೆ, ಗೋಪಾಲ ಶೆಟ್ಟಿಗಾರ್, ಸವಿತಾ ಪೂಜಾರಿ, ಮಹಾಲಿಂಗ, ವೀರ ಉಪಸ್ಥಿತರಿದ್ದರು.
ಚುನಾವಣಾಧಿಕಾರಿಯಾಗಿ ಸಹಕಾರಿ ಇಲಾಖೆಯ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಸಿ.ಎಂ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಬಿತಾ ಪೂಜಾರಿ ವಂದಿಸಿದರು.